ಶಿವಮೊಗ್ಗ: ದೀಪಾವಳಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ತೆರೆಯಲಾಗುವ ಪಟಾಕಿ ಮಳಿಗೆಗಳು ಹಾಗೂ ಉತ್ಪಾದನಾ ಕೇಂದ್ರಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸ್ಪಷ್ಟಪಡಿಸಿದೆ.
ಬಾಲ ಹಾಗೂ ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯನ್ವಯ, ಪಟಾಕಿ ತಯಾರಿಕೆ ಮತ್ತು ಮಾರಾಟವು ಅಪಾಯಕಾರಿ ವಲಯಕ್ಕೆ ಸೇರುವುದರಿಂದ ಅಪ್ರಾಪ್ತರನ್ನು ಇಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಯಾವುದೇ ಅಂಗಡಿ ಅಥವಾ ಘಟಕಗಳಲ್ಲಿ ಅಪ್ರಾಪ್ತರು ಕರ್ತವ್ಯ ನಿರ್ವಹಿಸುತ್ತಿರುವುದು ಕಂಡುಬಂದರೆ, ಅಂತಹ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.






ಓದುಗರ ಅಭಿಪ್ರಾಯಗಳು