ನ.08 ರಂದು ಬೆಳಗ್ಗೆಯಿಂದ ಸಂಜೆಯವರೆಗೆ ಶಿವಮೊಗ್ಗದಲ್ಲಿ ಕರೆಂಟ್ ಕಟ್: ಯಾವೆಲ್ಲಾ ಪ್ರದೇಶಗಳಲ್ಲಿ?

ಶಿವಮೊಗ್ಗ: ನಗರದ ಉಪವಿಭಾಗ-1ರ ಘಟಕ-1ರ ವ್ಯಾಪ್ತಿಯ 11 ಕೆ.ವಿ. ಮಾರ್ಗಗಳಲ್ಲಿ ತುರ್ತು ಜಂಗಲ್ ಕಟಿಂಗ್ (ಗಿಡ-ಮರಗಳ ತೆರವು) ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 8ರ ಭಾನುವಾರದಂದು ಬೆಳಗ್ಗೆ 10:00 ರಿಂದ ಸಂಜೆ 04:00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

  • ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ
  • ನಿಸರ್ಗ ಬಡಾವಣೆ, ಊರಗಡೂರು, ಸೂಳೆಬೈಲು
  • ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ
  • ಇಂದಿರಾನಗರ, ಕಂಟ್ರಿಕ್ಲಬ್ ರಸ್ತೆ
  • ಎಂ.ಸಿ. ಲೇಔಟ್, ಎಕೆಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಏರಿಯಾಗಳು.

ಸಾರ್ವಜನಿಕರು ಹಾಗೂ ಗ್ರಾಹಕರು ಈ ಕಾರ್ಯಕ್ಕೆ ಸಹಕರಿಸಬೇಕಾಗಿ ಮೆಸ್ಕಾಂ (MESCOM) ಪ್ರಕಟಣೆಯಲ್ಲಿ ಮನವಿ ಮಾಡಿದೆ.

ಓದುಗರ ಅಭಿಪ್ರಾಯಗಳು

Leave a Reply

Your email address will not be published. Required fields are marked *