ಶಿವಮೊಗ್ಗ: ನಗರದ ಸಾರ್ವಜನಿಕರಿಗೆ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಸೇವೆಗಳನ್ನು ತ್ವರಿತವಾಗಿ ಒದಗಿಸಲು KSRTC ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿ ನೂತನ ಮಾದರಿಯ ಆಧಾರ್ ಸೇವಾ ಕೇಂದ್ರವನ್ನು (ASK) ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ (AC) ಡಾ. ಮೈತ್ರಿ ಕರೆ ನೀಡಿದರು.
ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಯುಐಡಿಎಐ (UIDAI) ವತಿಯಿಂದ ಸ್ಥಾಪಿಸಲಾದ ಈ ಕೇಂದ್ರಕ್ಕೆ ಗುರುವಾರ ಅಧಿಕೃತ ಚಾಲನೆ ನೀಡಿ ಅವರು ಮಾತನಾಡಿದರು.

“ಶಿವಮೊಗ್ಗದಲ್ಲಿ ಜನಸಂಖ್ಯೆ, ಶಿಕ್ಷಣ ಸಂಸ್ಥೆಗಳು ಹಾಗೂ ಕೈಗಾರಿಕೆಗಳು ವಿಸ್ತಾರಗೊಳ್ಳುತ್ತಿರುವುದರಿಂದ ಆಧಾರ್ ಸೇವೆಗಳಿಗೆ ಬೇಡಿಕೆ ಹೆಚ್ಚಿದೆ. ಸಾರ್ವಜನಿಕರ ಸಮಯ ಉಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬವಿಲ್ಲದೆ, ಜನಸ್ನೇಹಿಯಾಗಿ ಸೇವೆ ನೀಡಬೇಕು. ಈ ಕೇಂದ್ರದಿಂದಾಗಿ ನಗರದ ಇತರ ಕೇಂದ್ರಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ” ಎಂದು ಡಾ. ಮೈತ್ರಿ ತಿಳಿಸಿದರು.
ಈ ಸಂದರ್ಭದಲ್ಲಿ ಯುಐಡಿಎಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಉಪ ನಿರ್ದೇಶಕಿ ಪ್ರಿಯಾ ಶ್ರೀಕುಮಾರ್, ಪ್ರಾಜೆಕ್ಟ್ ಮ್ಯಾನೇಜರ್ ರಿಕೇಶ್ ಕುಮಾರ್, ಸಹಾಯಕ ವ್ಯವಸ್ಥಾಪಕ ಪ್ರಸಾದ್ ಬಾಬು, ಬಿಎಲ್ಎಸ್ ಇಂಟರ್ನ್ಯಾಷನಲ್ ಕ್ಲಸ್ಟರ್ ಮ್ಯಾನೇಜರ್ ಶ್ಯಾಮ್ ಸುಂದರ್ ಹಾಗೂ ಜಿಲ್ಲಾ ಆಧಾರ್ ಸಂಯೋಜಕ ಸತೀಶ್ಚಂದ್ರ ಉಪಸ್ಥಿತರಿದ್ದರು.






ಓದುಗರ ಅಭಿಪ್ರಾಯಗಳು