ಹೊಸನಗರ: ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಹೊಸನಗರ: ತಾಲೂಕಿನ ಸಾಗರ–ಹೊಸನಗರ 33 ಕೆವಿ ವಿದ್ಯುತ್ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನವೆಂಬರ್ 3ರಂದು ಹೊಸನಗರ ತಾಲೂಕಿನ ಹಲವು ಗ್ರಾಮಗಳು ಹಾಗೂ ಪಟ್ಟಣ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಮಾರ್ಗದ ವಾರ್ಷಿಕ ನಿರ್ವಹಣೆ ಹಾಗೂ ಮಾರ್ಗಕ್ಕೆ ಅಡ್ಡಿಯಾಗಿರುವ ಮರಗಳ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯವನ್ನು ಮೆಸ್ಕಾಂ ವತಿಯಿಂದ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರದೇಶಗಳು:

  • ಹೊಸನಗರ ಪಟ್ಟಣ
  • ಜೇನಿ
  • ಹರಿದ್ರಾವತಿ
  • ಹರತಾಳು
  • ಪುರಪ್ಪೆಮನೆ
  • ಮಾರುತಿಪುರ
  • ರಾಮಚಂದ್ರಾಪುರ
  • ಮೇಲಿನಬೆಸಿಗೆ
  • ಸೊನಲೆ
  • ಎಂ. ಗುಡ್ಡೆಕೊಪ್ಪ
  • ಕರಿನಗೊಳ್ಳಿ
  • ಕೋಡೂರು

ನಿಗದಿತ ಅವಧಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುವುದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

ಕಾಮಗಾರಿಯಿಂದ ಉಂಟಾಗುವ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ಹೊಸನಗರ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ), ಸಾರ್ವಜನಿಕರು ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.

ಓದುಗರ ಅಭಿಪ್ರಾಯಗಳು

Leave a Reply

Your email address will not be published. Required fields are marked *