ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ ದಿಢೀರ್ ವರ್ಗಾವಣೆ: ಮಲೆನಾಡಿಗೆ ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ?

ಶಿವಮೊಗ್ಗ: ರಾಜ್ಯ ಸರ್ಕಾರವು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ದಿಢೀರ್ ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಪ್ರಕಾಶ್‌ ಜಿ.ಟಿ. ನಿಟಳಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡಿರುವ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ (ಕಮಿಷನರ್) ನಿಯೋಜಿಸಲಾಗಿದೆ. ಇವರು ಕಳೆದ ಜನವರಿಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಪ್ರಕಾಶ್ ಜಿ.ಟಿ ನಿಟಳಿ

ಇನ್ನು ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಪ್ರಕಾಶ್‌ ಜಿ.ಟಿ. ನಿಟಳಿ ಅವರು ಈ ಹಿಂದೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಶಿವಮೊಗ್ಗ ಜಿಲ್ಲಾಡಳಿತದ ಚುಕ್ಕಾಣಿ ಹಿಡಿಯಲು ನಿಯೋಜಿಸಲಾಗಿದೆ.

ಓದುಗರ ಅಭಿಪ್ರಾಯಗಳು

Leave a Reply

Your email address will not be published. Required fields are marked *