ಶಿವಮೊಗ್ಗ ‘ಭಾರತ್ ಜೋಡೋ ಯುವ ಸಂಘ’ಕ್ಕೆ ನಾಯಕನ ಎಂಟ್ರಿ: ನೂತನ ಸಂಯೋಜಕರಿಗೆ ಸಚಿವರ ಮಹತ್ವದ ಕಿವಿಮಾತು!

ಬೆಂಗಳೂರು/ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭಾರತ್ ಜೋಡೋ ಯುವ ಸಂಘದ (BJYS) ನೂತನ ಜಿಲ್ಲಾ ಯುವ ಸಂಯೋಜಕರಾಗಿ ಆಯ್ಕೆಯಾಗಿರುವ ಟಿ.ಡಿ. ಗೀತೇಂದ್ರ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಶುಭ ಕೋರಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಗೀತೇಂದ್ರ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.

ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಸಾಮಾಜಿಕ ಸೇವಾ ಕಾರ್ಯಕ್ರಮಗಳಲ್ಲಿ ಯುವಜನತೆಯನ್ನು ಹೆಚ್ಚಾಗಿ ತೊಡಗಿಸುವ ಮಹತ್ವಾಕಾಂಕ್ಷೆಯೊಂದಿಗೆ ‘ಭಾರತ್ ಜೋಡೋ ಯುವ ಸಂಘ’ವನ್ನು ರೂಪಿಸಲಾಗಿದೆ. ಜಿಲ್ಲೆಯ ಮೂಲೆ ಮೂಲೆಗಳಲ್ಲೂ ಯುವ ಸಮೂಹವನ್ನು ಒಗ್ಗೂಡಿಸಿ, ಸರ್ಕಾರದ ಈ ಸದುದ್ದೇಶವನ್ನು ಜನಸಾಮಾನ್ಯರಿಗೆ ತಲುಪಿಸುವಂತೆ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ವೇಗ ನೀಡುವಂತೆ ಸಚಿವರು ಈ ವೇಳೆ ನೂತನ ಸಂಯೋಜಕರಿಗೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಪ್ರಮುಖ ಮುಖಂಡರಾದ ಆಯನೂರು ಮಂಜುನಾಥ್, ಆರ್. ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ಒಬಿಸಿ ರಾಜ್ಯ ಘಟಕದ ಸಂಯೋಜಕ ಜಿ.ಡಿ. ಮಂಜುನಾಥ್, ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್ ಮತ್ತು ಶರತ್ ಮರಿಯಪ್ಪ ಹಾಜರಿದ್ದರು.

ಓದುಗರ ಅಭಿಪ್ರಾಯಗಳು

Leave a Reply

Your email address will not be published. Required fields are marked *